Kundapra.com ಕುಂದಾಪ್ರ ಡಾಟ್ ಕಾಂ

ಇಡೂರು-ಕುಂಜ್ಞಾಡಿ: ಶಿಕ್ಷಕ ವಗಾವಣೆ ಖಂಡಿಸಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಡೂರು-ಕುಂಜ್ಞಾಡಿಯಲ್ಲಿ ಸಾಕಷ್ಟು ವಿದ್ಯಾರ್ಥಿಗಳಿದ್ದರೂ, ಹೆಚ್ಚುವರಿ ಶಿಕ್ಷಕರ ನೆವದಲ್ಲಿ ಶಿಕ್ಷಕರ ವರ್ಗಾವಣೆ ಖಂಡಿಸಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶಾಲಾ ಮುಂಭಾಗ ಕೂತು ಪ್ರತಿಭಟನೆ ನಡೆಸಿದರೆ, ಸಾರ್ವಜನಿಕರು ಅವರಿಗೆ ಸಾಥ್ ನೀಡಿದರು. ಕನ್ನಡ ಮಾಧ್ಯಮ ಶಾಲೆ ಉಳಿಸುವ ನಿಟ್ಟಿನಲ್ಲಿ ಶಾಲಾ ಎಸ್ಡಿಎಂಸಿ ಸದಸ್ಯರು ಪ್ರಯತ್ನಿ ಮಾಡಿದರೆ ಶಿಕ್ಷಕರ ವರ್ಗಾವಣೆ ಮೂಲಕ ಕನ್ನಡ ಶಾಲೆ ಕೊಲ್ಲುವ ಕೆಲಸ ಸರಕಾರ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಹೆಚ್ಚುವರಿ ಹೆಸರಲ್ಲಿ ಶಿಕ್ಷಕರ ವರ್ಗಾವಣೆಯಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗುತ್ತದೆ. ವರ್ಗಾವಣೆ ಆದೇಶ ಹಿಂದಕ್ಕೆ ಪಡೆಯದಿದ್ದರೆ ಉಗ್ರ ಹೋರಾಟಕ್ಕೆ ನಾವು ಸಿದ್ದ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇಡೂರು ಕುಂಜ್ಞಾಡಿ ಗ್ರಾಪಂ ಅಧ್ಯಕ್ಷೆ ಸಾವಿತ್ರಿ ಆಚಾರ‍್ಯ, ಉಪಾಧ್ಯಕ್ಷೆ ಸಾಧಮ್ಮ ಶೆಡ್ತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ದೇವಾಡಿಗ, ಸಂತೋಷ್ ಕುಮಾರ್ ಶೆಟ್ಟಿ ಹೇಸಿನಬೇರು, ಆನಂದ ಪೂಜಾರಿ, ರಾಜು ನಾಯ್ಕ್, ಬಾಲಕೃಷ್ಣ ಶೆಟ್ಟಿ ಇಂಬು, ಅಣ್ಣಪ್ಪ ಎಸ್.ಪೂಜಾರಿ ಪ್ರತಿಭಟನೆ ನಡೆಸಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಅವರಿಗೆ ಮನವಿ ಸಲ್ಲಿಸಿದರು.

Exit mobile version