ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ಕಾಟಕ ಅಮಾವಾಸ್ಯೆ ಪ್ರಯುಕ್ತ ಪ್ರಕೃತಿಯ ಭವ್ಯ ಸೊಬಗು ಹೊದ್ದು ಕಂಗೋಳಿಸುವ ಪಡುವರಿಯ ಸೋಮೇಶ್ವರನ ಸನ್ನಿಧಿಯಲ್ಲಿ ಸಮುದ್ರ ಸ್ನಾನ ಹಾಗೂ ವಾರ್ಷಿಕ ಜಾತ್ರೆ ಮಹೋತ್ಸವವು ಸಂಭ್ರಮ-ಸಡಗರದಿಂದ ನಡೆಯಿತು.
ನಸುಕಿನಿಂದಲೇ ಆಸುಪಾಸಿನ ಊರುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮರವಂತೆಗೆ ಆಗಮಿಸಿ ಇಲ್ಲಿನ ಸೋಮೇಶ್ವರದ ಸಮುದ್ರದಲ್ಲಿ ಮಿಂದ ಭಕ್ತರು ದೇವಳದ ಎದುರಿನ ಕೆರೆಯಲ್ಲಿ ಸ್ನಾನಗೈದು ಪುನೀತರಾದರು. ಕರ್ಕಾಟಕ ಅಮಾವಾಸ್ಯೆ ಜಾತ್ರೆಯ ಸಂಪ್ರದಾಯದಂತೆ ನವವಧುವರರು, ಕೃಷಿಕರು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಶ್ರೀವರಾಹ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ವರ್ಷದ ಹರಕೆಯನ್ನು ಒಪ್ಪಿಸಿದರು.
ಭಕ್ತರು ಶ್ರೀ ದೇವರ ದರ್ಶನ, ಪೂಜೆ-ಪುನಸ್ಕಾರದಲ್ಲಿ ಸುಸೂತ್ರವಾಗಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ದೇವಸ್ಥಾನದ ಆಡಳಿತ ಮಂಡಳಿಯು ವ್ಯವಸ್ಥೆ ಮಾಡಿತ್ತು. ಶ್ರೀದೇವರ ದರ್ಶನ ಪಡೆಯುವುದಕ್ಕಾಗಿ ಭಕ್ತಾದಿಗಳು ದೇವಸ್ಥಾನದಿಂದ ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡುಬಂದಿತು.