Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಮಹಿಳೆ ಆರ್ಥಿಕ ಸ್ವಾವಲಂಬಿಯಾಗಲು ನವೋದಯ ಸ್ವಸಹಾಯ ಗುಂಪುಗಳು ಸಹಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನವೋದಯ ಸ್ವಸಹಾಯ ಗುಂಪುಗಳ ಮೂಲಕ ಪ್ರತಿ ಮಹಿಳೆಯನ್ನು ಆರ್ಥಿಕ ಸ್ವಾವಲಂಭಿಗಳನ್ನಾಗಿಸಲು ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ ಸಹಕಾರಿ ತತ್ವದಡಿಯಲ್ಲಿ ಆರ್ಥಿಕ ನೆರವಿನೊಂದಿಗೆ ವಿವಿಧ ಸೌಲಭ್ಯಗಳನ್ನು ನಿರಂತರವಾಗಿ ಒದಗಿಸುತ್ತಿರುವುದಲ್ಲದೇ, ಅಗತ್ಯವಿರುವವರ ನೋವಿಗೂ ಸ್ಪಂದಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ ಹೇಳಿದರು.

ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಕುಂದಾಪುರ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಇತ್ತಿಚಿಗೆ ಮೃತರಾದ ಗಂಗೊಳ್ಳಿ ಶ್ರೀ ರಾಮನಾಥ ಸುಹಾಸಿನಿ ನವೋದಯ ಸ್ವಸಹಾಯ ಗುಂಪಿನ ಸದಸ್ಯೆ ಜ್ಯೋತಿ ಅವರ ಕುಟುಂಬಕ್ಕೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಎನ್. ರಾಜೇಂದ್ರಕುಮಾರ್ ಅವರು ನೀಡಿದ 1 ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ಹಸ್ತಾಂತರಿಸಿ ಮಾತನಾಡಿದರು.

ನವೋದಯ ಸ್ವಸಹಾಯ ಗುಂಪಿನ ಮೇಲ್ವಿಚಾರಕ ಶಿವರಾಮ ಪೂಜಾರಿ, ಕುಂದಾಪುರ ಶಾಖಾ ಪ್ರಬಂಧಕ ರಾಮ ಆಚಾರ್, ತಾಲೂಕು ನವೋದಯ ಸಂಘದ ಮೇಲ್ವಿಚಾರಕ ಮನೋಹರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಸ್ವಸಹಾಯ ಗುಂಪುಗಳ 120 ಫಲಾನುಭವಿಗಳಿಗೆ 3.27ಕ್ಷ ಚೈತನ್ಯ ವಿಮಾ ಪರಿಹಾರ ಚೆಕ್ ವಿತರಿಸಲಾಯಿತು.

Exit mobile version