ಕುಂದಾಪ್ರ ಡಾಟ್ ಕಾಂ ಸುದ್ದಿ.
ಮಂಗಳೂರು: ದ.ಕ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತುಳು ಭವನ ಸಿರಿ ಛಾವಡಿಯಲ್ಲಿ ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವಿಧ ಸಂಗೀತ, ನೃತ್ಯ ಪ್ರಕಾರಗಳು ಪ್ರದರ್ಶನಗೊಂಡಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ. ಎಂ. ರವಿಕುಮಾರ್ ಉಪಸ್ಥಿತಿರಿದ್ದರು.