Kundapra.com ಕುಂದಾಪ್ರ ಡಾಟ್ ಕಾಂ

ಹಾಲಾಡಿ: ಲಾರಿ ಡಿಕ್ಕಿಯಾಗಿ ಬೈಕ್ ಸವಾರನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹಾಲಾಡಿ ಪೇಟೆಯ ಬಳಿ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಹಳ್ನಾಡಿಯ ಚಂದ್ರ ಮಡಿವಾಳ (41) ಮೃತ ದುರ್ದೈವಿ.

ಪತ್ನಿಯ ಮನೆಯಿಂದ ಹಳ್ನಾಡಿಗೆ ತೆರಳುತ್ತಿದ್ದ ವೇಳೆ ಹಾಲಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಚಂದ್ರ ಮಡಿವಾಳ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version