Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ದನಗಳು ವಶಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದದ ತಾರಾಪತಿಯಿಂದ ಬೈಂದೂರು ಮದ್ದೋಡಿ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಅದರಲ್ಲಿದ್ದ ಮೂರು ದನಗಳನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾಹನದಲ್ಲಿದ್ದ ಮೂವರ ಪೈಕಿ ಇಬ್ಬರು ಪರಾರಿಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಪರವಾನಿಗೆಯಿಲ್ಲದೇ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದರೆನ್ನಲಾಗಿದೆ. ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version