Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ: ಅಖಂಡ ಭಜನಾ ಸಪ್ತಾಹ ಸಮಾಪನ

?

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದ ಆರಂಭಗೊಂಡಿದ್ದ ಅಖಂಡ ಭಜನಾ ಸಪ್ತಾಹ ಮಹೋತ್ಸವು ಸೋಮವಾರ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿದೆ.

ಭಜನಾ ಸಪ್ತಾಹ ಮಹೋತ್ಸವದ ಅಂಗವಾಗಿ ಸಂಜೆ ನಗರ ಭಜನೆ, ರಾತ್ರಿ ಶ್ರೀದೇವರಿಗೆ ವಿಶೇಷ ಪೂಜೆ ಮೊದಲಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಆಗಸ್ಟ್ 8ರಂದು ಆಗಸ್ಟ್ 14ರವರೆಗೆ ಊರ ಪರ ಊರುಗಳಿಂದ ಆಗಮಿಸಿದ ಸುಮಾರು ೩೦ಕ್ಕೂ ಮಿಕ್ಕಿ ಭಜನಾ ತಂಡಗಳು ಭಜನಾ ಸೇವೆ ನಡೆಸಿಕೊಟ್ಟರು. ಏಳು ದಿನ ಶ್ರೀದೇವರಿಗೆ ವಿವಿಧ ಪೂಜೆ ಪುನಸ್ಕಾರಗಳು ವಿಧಿವಿಧಾನಗಳೊಂದಿಗೆ ಭಕ್ತಿಶ್ರದ್ಧೆಯಿಂದ ವಿಜೃಂಭಣೆಯಿಂದ ನಡೆಯಿತು. ಅಸಂಖ್ಯ ಭಕ್ತರು ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Exit mobile version