Kundapra.com ಕುಂದಾಪ್ರ ಡಾಟ್ ಕಾಂ

ಬದುಕಿನಲ್ಲಿ ವ್ಯವಹಾರ ಮನಸ್ಥಿತಿ ಅಗತ್ಯ : ಡಾ. ಶ್ರೀಪತಿ ಕಲ್ಲೂರಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆರ್ಥಿಕ ಅಭಿವೃದ್ಧಿಯ ಶಕ್ತಿ. ಅಂತರಾಷ್ಟ್ರೀಯ ವ್ಯವಹಾರ ಅಭಿವೃದ್ಧಿಯನ್ನೊಳಗೊಂಡಂತೆ ಅರ್ಥಶಾಸ್ತ್ರದ ಮೂಲ ವಸ್ತುಸ್ಥಿತಿಯನ್ನು ವೈಜ್ಞಾನಿಕ ತಳಹದಿಯೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಗೆ ಪರಿಚಯಿಸುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಹಣಕಾಸು ಅಧಿಕಾರಿ, ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.

ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಂಘದ ಆಶ್ರಯದಲ್ಲಿ ನಡೆದ ’ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಯಾಂತ್ರಿಕ ಕೌಶಲ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಶ್ರೀ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಂಘದ ಸಂಚಾಲಕರಾದ ಸುಧಾಕರ್ ಪಾರಂಪಳ್ಳಿ ಸ್ವಾಗತಿಸಿದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಮಹೇಶ್ ಕೊಠಾರಿ ಅತಿಥಿಗಳನ್ನು ಪರಿಚಯಿಸಿದರು, ವಿದ್ಯಾರ್ಥಿನಿ ಕಾವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು, ಸಂಘದ ಸಹ ಸಂಚಾಲಕಿ ಅವಿತಾ ಕೊರಿಯಾ ವಂದಿಸಿದರು.

Exit mobile version