Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ(ರಿ.) ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಧ್ವಜಾರೋಹಣವನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ರಾಜೇಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್., ಕಾಲೇಜಿನ ಬೋಧಕ-ಬೋಧಕೇತರರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕವನ ವಂದಿಸಿದರು, ಪ್ರಗತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Exit mobile version