Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನಕ್ಕೆ ಸಚಿವರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.

ಕೋಟ: ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನಕ್ಕೆ ಯುವಜನ ಸೇವೆ, ಕ್ರೀಡೆ, ಮೀನುಗಾರಿಕೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಪ್ರಥಮ ಬಾರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಅನಂತ ಪದ್ಮನಾಭ ಐತಾಳ್ ಆದರದಿಂದ ಸ್ವಾಗತಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಜನಾರ್ದನ ಅಡಿಗ ದೇವರಿಗೆ ವಿಶೇಷ ಪೂಜೆ ನಡೆಸಿ ಸಚಿವರಿಗೆ ಪ್ರಸಾದ ವಿತರಿಸಿ ಆಶೀರ್ವದಿಸಿದರು. ಬಳಿಕ ದೇವಸ್ತಾನದ ವತಿಯಿಂದ ಸಚಿವರನ್ನು ಶಾಲು ಹೊದಿಸಿ ಸನ್ಮಾನಿ ಗೌರವಸಲಾಯಿತು. ಈ ಸಂದರ್ಭ ಕೋಟ ಶ್ರೀ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಆನಂದ ಸಿ ಕುಂದರ್, ಉಡುಪಿ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್ ಅಧ್ಯಕ್ಷ ಅನಂತ ಶ್ಯಾನುಭೋಗ್, ದೇವಸ್ಥಾನ ಪಿ.ಸಿ.ಹೊಳ್ಳ, ಶ್ರೀಪತಿ ಅಧಿಕಾರಿ, ತಾರಾನಾಥ ಹೊಳ್ಳ, ಚಂದ್ರಶೇಖರ ಅಡಿಗ, ರೋಟರಿ ಅಧ್ಯಕ್ಷ ಮುರುಳೀಧರ ನಾಯಿರಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಶಂಕರ ಕುಂದರ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯ ಅಚ್ಚುತ್ ಪೂಜಾರಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಪಾಂಡೇಶ್ವರ ಪಂಚಾಯಿತಿ ಮಾಜಿ ಅಧ್ಯಕ್ಷೆ ಲೀಲಾವತಿ ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು.

Exit mobile version