Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರಕಾರಿ ಪ.ಪೂ ಕಾಲೇಜಿನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೆಜಿನಲ್ಲಿ ಐದು ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನಾಲ್ಕು ನೂತನ ಶೌಚಾಲಯವನ್ನು ಉದ್ಘಾಟನೆ ಹಾಗೂ ರೂ. 54 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ 2 ತರಗತಿ ಕೊಠಡಿ ಹಾಗೂ ಹೆಚ್ಚುವರಿ ನಾಲ್ಕು ಶೌಚಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಶಾಸಕ ಕೆ. ಗೋಪಾಲ ಪೂಜಾರಿ ಶಂಕುಸ್ಥಾಪನೆ ನೆರವೇರಿಸಿದರು. ಪ್ರಾಂಶುಪಾಲ ಪಾಲಾಕ್ಷ ಟಿ., ಉಪಪ್ರಾಂಶುಪಾಲೆ ಜ್ಯೋತಿ ಶ್ರೀನಿವಾಸ್, ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಗ್ರಾಪಂ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಿ.ಎಂ. ನಾಗರಾಜ ಗಾಣಿಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

news Byndoor GJC1

Exit mobile version