Kundapra.com ಕುಂದಾಪ್ರ ಡಾಟ್ ಕಾಂ

ಮಾರಣಕಟ್ಟೆ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಕಾಲುಸಂಕಗಳಿಗೆ ಶಿಲಾನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರ್ಕಾರದ ಹಣ ಸದ್ಬಳಕೆ ಆಗಬೇಕು. ಗ್ರಾಮೀಣ ಪ್ರದೇಶಗಳಿಗೆ ಅನುದಾನ ತಲುಪಬೇಕು ಎನ್ನುವ ನೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿಯೇ ಸಾಕಷ್ಟು ಕಾಮಗಾರಿಗೆ ಅತೀ ಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ ಇದರ ಅಧ್ಯಕ್ಷ ನಿವೇದಿತ್ ಆಳ್ವ ಹೇಳಿದರು.

ಅವರು ಚಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಣಕಟ್ಟೆಯಲ್ಲಿ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹತ್ತಿರದಿಂದ ಸಂನ್ಯಾಸಿಬೆಟ್ಟುವಿಗೆ ಕಾಲು ಸಂಕ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬೈಂದೂರು ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಕೊಲ್ಲೂರು ಗ್ರಾ. ಪಂ. ವ್ಯಾಪ್ತಿಯ ಕೊಲ್ಲೂರು ಗ್ರಾಮದ ಹಳ್ಳಿಬೇರು ರಾಮ ಮನೆ ಹತ್ತಿರ ಕಾಲುಸಂಕ ನಿರ್ಮಾಣ, ವಂಡ್ಸೆ ಗ್ರಾ.ಪಂ ವ್ಯಾಪ್ತಿಯ ವಂಡ್ಸೆ ಪೇಟೆಯಿಂದ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿ, ಗುಜ್ಜಾಡಿ ಗ್ರಾ. ಪಂ. ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ಕಡಮಾರು ಗೋವಿಂದ ಪೂಜಾರಿ ಮನೆ ಹತ್ತಿರ ಕಾಲು ಸಂಕ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ತಾ.ಪಂ ಸದಸ್ಯ ಉದಯ ಜಿ.ಪೂಜಾರಿ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಮೆಸ್ಕಾಂ ನಿರ್ದೇಶಕ ಸಂಪಿಗೇಡಿ ಸಂಜೀವ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ ಡಿಸೋಜ, ಜಿ.ಪಂ.ಎಎ ಲಕ್ಷ್ಮೀನಾರಾಯಣ, ಡಾ.ಅತುಲ್ ಕುಮಾರ್ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ರಮೇಶ ಗಾಣಿಗ ಕೊಲ್ಲೂರು, ಗುಂಡು ಪೂಜಾರಿ, ಚಿತ್ತೂರು ಗ್ರಾ.ಪಂ.ಉಪಾಧ್ಯಕ್ಷ ಅಣ್ಣಪ್ಪ ನಾಯ್ಕ್, ವಂಡ್ಸೆ ಗ್ರಾ.ಪಂ,..ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಅರ್ಚಕ ನಾಗರಾಜ ಮಂಜರು, ವಂಡ್ಸೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹೆಚ್.ವಿ ಇಬ್ರಾಹೀಂಪುರ್ ಮೊದಲಾದವರು ಉಪಸ್ಥಿತರಿದ್ದರು. ಚಿತ್ತೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸಂದೇಶ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಗೋವರ್ಧನ ಜೋಗಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version