Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಭೇಟಿ ನೀಡಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಬೆಳವಣಿಗೆಯನ್ನು ಶ್ಲಾಘಿಸಿದರು. ಕಾಲೇಜಿನ ಆವರಣದಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಬೋಧಕ-ಬೋಧಕೇತರ ವರ್ಗದವರ ಜೊತೆ ಸಂವಾದ ನಡೆಸಿದರು. ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಈ ಎಜ್ಯುಕೇಶನ್ ಸೊಸೈಟಿಯಲ್ಲಿ ಪ್ರತೀ ವರ್ಷ ಅಧ್ಯಯನ ಮಾಡುತ್ತಿರುವುದು ಉಲ್ಲೇಖನೀಯ. ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚು ಮನ್ನಣೆ ನೀಡುತ್ತಿರುವುದು ಹಾಗೂ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡುತ್ತಿರುವುದು ಮೆಚ್ಚತಕ್ಕ ಸಂಗತಿ. ಈ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರಜ್ಞಾವಂತ ಪ್ರಜೆಗಳಾಗಲಿ ಎಂದು ಶುಭ ಹಾರೈಸಿದರು.

ಮಟ್ಟಾರ್ ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಸದಾನಂದ ಶೇರೆಗಾರ್ ಬೈಂದೂರು ಮತ್ತು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಕಾಲೇಜಿನ ವಾಣಿಜ್ಯ ಉಪನ್ಯಾಸಕಿ ಕು. ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.

Exit mobile version