ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಕ್ಷಣದ ಮೂಲ ಉದ್ದೇಶ ಶಿಕ್ಷಣ ಪಡೆಯುವುದು ಮಾತ್ರವಲ್ಲ. ಶಿಕ್ಷಣ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಸಮಾಜಮುಖಿ ಕೆಲಸ ಮಾಡಿಕೊಂಡು ಬಂದಾಗ ಮಾತ್ರ ಕಲಿತ ವಿಷಯಕ್ಕೆ ಗೌರವಕೊಟ್ಟಾಂತಾಗುತ್ತದೆ ಎಂದು ಪ್ರಥಮ ದರ್ಜೆ ಗುತ್ತಿಗೆದಾರ ಜೆ.ಪಿ.ಶೆಟ್ಟಿ ಕಾಳಾವರ ಹೇಳಿದರು. ಬುಧವಾರ ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ತರಗತಿ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಸಭೆಯ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿ ಬ್ರಹ್ಮಾವರ ಬಿ.ಡಿ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಎಂ. ಹೆಗಡೆ ಮಾತನಾಡಿ ವಿದ್ಯಾರ್ಥಿಗಳು ತಮ್ಮೊಳಗೆ ಇರುವ ಸಾಮರ್ಥ್ಯವನ್ನು ಮೊದಲು ತಿಳಿದುಕೊಳ್ಳಬೇಕು. ಆಗ ಜೀವನದಲ್ಲಿ ಧೈರ್ಯವಾಗಿ ಮುಂದೆ ಬರಲು ಸಾಧ್ಯ. ಇತನ್ನಿತರ ಸಮಾಜಮುಖಿ ವಿಷಯಗಳ ಬಗ್ಗೆ ಹವ್ಯಾಸ ಬೆಳಸಿಕೊಂಡಾಗ ವಿದ್ಯಾರ್ಥಿ ಜೀವನದಲ್ಲಿ ಯಶ್ವಸಿಯಾಗಲು ಸಾಧ್ಯ ಎಂದು ನೂತನ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಉಷಾದೇವಿ ಜೆ.ಎಸ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ. ಶಂಕರ ನಾಯ್ಕ, ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಚಾಲಕ ಗೀತಾ ಎಂ. ಉಪಸ್ಥಿತರಿದರು. ಉಪನ್ಯಾಸಕ ಸಂತೋಷ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಗೀತಾ ಸ್ವಾಗತಿಸಿದರು. ಉಪನ್ಯಾಸಕಿ ಉಜ್ವಲ ವಂದಿಸಿದರು.