Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜಿನೆವಾ ಕನ್‌ವೆನಶನ್ ಡೇ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿನೆವಾದಲ್ಲಿ ಕೈಗೊಂಡ ನಿರ್ಣಯಗಳು. ರೆಡ್‌ಕ್ರಾಸ್ ಸಂಸ್ಥೆ ಬೆಳೆದು ಬಂದ ದಾರಿ ಮತ್ತು ಅದು ಅಂತರಾಷ್ಟ್ರೀಯ ಸಂಸ್ಥೆಯಾಗಿ ಗುರುತಿಸಿಕೊಂಡ ಬಗ್ಗೆ ಹಾಗೂ ಇದೇ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ಕುಂದಾಪುರದ ಹಿರಿಯ ನ್ಯಾಯವಾದಿ ಗಿಳಿಯಾರು ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು.

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಆಶ್ರಯದಲ್ಲಿ ಜಿನೆವಾ ಕನ್‌ವೆನ್‌ಶನ್ ಡೇ ದಿನ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಜಯಕರ ಶೆಟ್ಟಿ, ರೆಡ್‌ಕ್ರಾಸ್ ಸೊಸೈಟಿಯ ಸಂಯೋಜಕ ಮುತ್ತಯ್ಯ ಶೆಟ್ಟಿ, ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ, ಉಪನ್ಯಾಸಕ ಪ್ರವೀಣ್ ಮೊಗವೀರ ಮತ್ತು ಜ್ಯೋತಿ ಮೊಗವೀರ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಸ್ವಾಗತಿಸಿದರು. ಸಹ ಸಂಯೋಜಕ ಶಿವರಾಜ್ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ದೀಕ್ಷಿತ್ ಅತಿಥಿಗಳನ್ನು ಪರಿಚಯಿಸಿದರು. ಶ್ರೀಜಾ ಉಡುಪ ಕಾರ್ಯಕ್ರಮ ನಿರೂಪಿಸಿದರು.

Exit mobile version