Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಸ್ತಿಪಟು ಆದರ್ಶ ಕುಮಾರ್ ಶೆಟ್ಟಿ ಮಾತನಾಡಿ, ಕುಸ್ತಿಯನ್ನು ಬಹಳ ಶೃದ್ಧೆ, ಭಕ್ತಿ ಮತ್ತು ಶಿಸ್ತಿನಿಂದ ಕಲಿಯಬೇಕು. ಹಾಗೆ ಪ್ರಯತ್ನಪೂರ್ವಕವಾಗಿ ಯಶಸ್ವಿ ಕುಸ್ತಿಪಟುವಾಗಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿಶ್ವಸ್ಥರಾದ ಪ್ರಕಾಶ್ ಟಿ ಸೋನ್ಸ್, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಆರ್.ಬಿ.ನಾಯ್ಕ್, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕರಾದ ಶ್ರೀಧರ ಶೆಟ್ಟಿ, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ದೈಹಿಕ ನಿರ್ದೇಶಕರ ಸಂಘದ ಅದ್ಯಕ್ಷರಾದ ವಸಂತ ಶೆಟ್ಟಿ, ಗೌರವಾಧ್ಯಕ್ಷರಾದ ಶರತ್ ರಾವ್, ಬಸ್ರೂರಿನ ಶ್ರಿ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಯಪ್ರಕಾಶ ಶೆಟ್ಟಿ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಆಗಮಿಸಿದ್ದರು.

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ.ಗೊಂಡ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ದೈಹಿಕ ನಿರ್ದೇಶಕರಾದ ಶಂಕರನಾರಾಯಣ ಪರಿಚಯಿಸಿ ವಂದಿಸಿದರು. ವಿದ್ಯಾರ್ಥಿನಿ ಕೀರ್ತಿ ಎಸ್. ಕಾರ್ಯಕ್ರಮ ನಿರ್ವಹಿಸಿದರು.

Exit mobile version