ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಪ್ಪಿನಕುದ್ರುವಿನ ನೇತಾಜಿ ಕಮಿಟಿ ಫ್ರೆಂಡ್ಸ್‌ನ ಅಧ್ಯಕ್ಷ ದಿನೇಶ್ ದೇವಾಡಿಗ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಬಿಲ್ಲವ, ಕುಂದಾಪುರ ತಾಲೂಕು ಪಂಚಾಯತ್ ಸದಸ್ಯ ಕರುಣಾಕರ ಪೂಜಾರಿ, ನಾರಾಯಣ ವಿಕಲ ಚೇತನ ಶಾಲೆಯ ಮುಖ್ಯಸ್ಥ ಸುರೇಶ್ ತಲ್ಲೂರು, ನೇತಾಜಿ ಕಮಿಟಿ ಫ್ರೆಂಡ್ಸ್‌ನ ಗೌರವಾಧ್ಯಕ್ಷ ವಿಜೇಯ ಮೆನೇಜಸ್, ಯುವಕ ಮಂಡಲದ ಅಧ್ಯಕ್ಷ ಗಿರೀಶ್ ನಾಯಕ್, ಗಿರೀಶ್ ಹಲ್ಸ್‌ನಾಡು ಉಪ್ಪಿನಕುದ್ರು, ಅಕಾಡೆಮಿಯ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್, ನಾಗೇಶ್ ಶ್ಯಾನುಭಾಗ್ ಇನ್ನಿತರರು ಉಪಸ್ಥಿತರಿದ್ದರು. ನೇತಾಜಿ ಕಮಿಟಿ ಫ್ರೆಂಡ್ಸ್ ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತಲ್ಲೂರಿನ ನಾರಾಯಣ ವಿಕಲ ಚೇತನರ ವಿಶೇಷ ತರಬೇತಿ ಕೇಂದ್ರದ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರುಗಿತು.