Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಬಿಜೆಪಿ ಸರಕಾರದ ಮಹಿಳಾ ಪರ ಯೋಜನೆಗಳು ಕಾಂಗ್ರೆಸ್ ಅವಧಿಯಲ್ಲಿ ನೆನೆಗುದಿಗೆ: ಕರಂದ್ಲಾಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕದಲ್ಲಿ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಮಹಿಳಾ ಹಿತಾಸಕ್ತಿ ಯೋಜನೆಗಳು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನೆನೆಗುದಿಗೆ ಸರಿದಿದ್ದು, ಅದನ್ನು ಮತ್ತೆ ಚಾಲನೆಗೆ ತರಲು ಬಿಜೆಪಿ ಸರಕಾರ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯವಿದೆ. ಈ ನಿಟ್ಟಿನಲ್ಲಿ ಮಹಿಳೆಯರು ರಾಜಕೀಯದಲ್ಲಿ ಕ್ರಿಯಾಶೀಲತೆಯಿಂದ ಕೆಲಸ ಮಾಡುವ ಜವಾಬ್ದಾರಿ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಕುಂದಾಪುರ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ಪದಗ್ರಹಣವನ್ನು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನೆರವೇರಿಸಿ ಮಾತನಾಡಿ, ಬಿಜೆಪಿ ಸರಕಾರ ರಾಜ್ಯದಲ್ಲಿ ಸ್ತ್ರೀ ಬಲವರ್ಧನೆಗಾಗಿ ಭಾಗ್ಯಲಕ್ಷ್ಮೀ ಸಂಧ್ಯಾ ಸುರಕ್ಷಾ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್ ಸರಕಾರ ಯೋಜನೆ ಅರ್ಧಕ್ಕೆ ನಿಲ್ಲಿಸಿದೆ. ಯೋಜನೆಗಳ ಪುನರಾರಂಭಿಸಲು ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರು.

ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ಜಾನಕಿ ಬಿಲ್ಲವ ಬಿಜೆಪಿ ಕುಂದಾಪುರ ಕ್ಷೇತ್ರದ ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದು, ಸಂಸದೆ ಶೋಭಾ ಕರಂದ್ಲಾಜೆ ಪದಗ್ರಹಣ ನೆರೆವೇರಿಸಿದರು.

ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಯನಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಕಾರ‍್ಯಕಾರಿಣಿ ಸಮಿತಿ ಕಾರ‍್ಯದರ್ಶಿ ವಿಕ್ರಮಾರ್ಜುನ ಹೆಗ್ಗಡೆ, ರಾಜ್ಯ ಕಾರ‍್ಯಕಾರಿಣಿ ಸಮಿತಿ ಸದಸ್ಯರಾದ ಉದಯ ಕುಮಾರ್ ಶೆಟ್ಟಿ,ಕಿರಣ್ ಕೊಡ್ಗಿ, ಪ್ರಧಾನ ಕಾರ‍್ಯದರ್ಶಿ ಶ್ಯಾಮಲಾ ಕುಂದರ್, ಉಡುಪಿ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಕುಂದಾಪುರ ತಾಪಂ. ಅಧ್ಯಕ್ಷೆ ಜಯಶ್ರೀ ಸುಧಾಕರ ಮೊಗವೀರ, ಜಿಲ್ಲಾ ಒಬಿಸಿ ಅಧ್ಯಕ್ಷ ರಾಜೇಶ್ ಕಾವೇರಿ, ಮಹಿಳಾ ಮೋರ್ಚಾ ಪ್ರಧಾನ ಕಾರ‍್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕುಂದಾಪುರ ಉಸ್ತುವಾರಿ ಸಂಧ್ಯಾ ರಮೇಶ್, ಕುಂದಾಪುರ ಮಂಡಲ ಉಪಾಧ್ಯಕ್ಷ ಪ್ರಕಾಶ್ ಮೆಂಡನ್, ಪ್ರಧಾನ ಕಾರ‍್ಯದರ್ಶಿ ಶಂಕರ್ ಅಂಕದಕಟ್ಟೆ, ಭಾಸ್ಕರ ಬಿಲ್ಲವ, ಯುವ ಮೋರ್ಚಾ ಪ್ರಧಾನ ಕಾರ‍್ಯದರ್ಶಿ ಪ್ರದೀಪ್ ಕುಮಾರ್ ಇದ್ದರು.

ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು ಪ್ರಸ್ತಾವಿಕ ಮಾತನಾಡಿದರು. ಕುಂದಾಪುರ ಮಹಿಳಾ ಮೋರ್ಚಾ ಪ್ರಧಾನ ಕಾರ‍್ಯದರ್ಶಿ ನಿರ್ಮಲಾ ಸ್ವಾಗತಿಸಿರು. ಬೀಜಾಡಿ ಜಿಪಂ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ನಿರೂಪಿಸಿದರು. ಕುಂದಾಪುರ ತಾಪಂ ಸದಸ್ಯೆ ರೂಪಾ ಪೈ ವಂದೇ ಮಾತರಂ ಹಾಡಿದರು.

Exit mobile version