Kundapra.com ಕುಂದಾಪ್ರ ಡಾಟ್ ಕಾಂ

ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 253ಕೋಟಿ ವ್ಯವಹಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು 2015-16ನೇ ಸಾಲಿನಲ್ಲಿ 253 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ 71.94 ಲಕ್ಷ ರೂ. ಲಾಭಗಳಿಸಿದೆ ಎಂದು ಸೊಸೈಟಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ತಿಳಿಸಿದರು.

ಸೋಮವಾರ ಬೈಂದೂರಿನ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ ಸೋಸೈಟಿಯು 26.92ಕೋಟಿ ರೂ. ಠೇವಣಿ ಸಂಗ್ರಹಿಸಿ, 21.23ಕೋಟಿ ರೂ. ಸಾಲರುವುದಲ್ಲದೇ ಆರ್ಥಿಕ ವರ್ಷದಲ್ಲಿ ಒಟ್ಟು 253ಕೋಟಿ ವಹಿವಾಟು ನಡೆಸಿದೆ. 71.94ಲಕ್ಷ ರೂ. ಲಾಭಾಂಶದಲ್ಲಿ ಸದಸ್ಯರಿಗೆ ಶೇ.14 ಡಿವಿಡೆಂಟ್ ಘೋಷಿಸಲಾಗಿದೆ ಎಂದರು.

ಗ್ರಾಹಕರೊಂದಿಗೆ ಉತ್ತಮ ಭಾಂದವ್ಯ ಹೊಂದಿ ವ್ಯವಹಾರ ನಡೆಸುತ್ತಿರುವ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಈಗಾಗಲೇ ೬ ಶಾಖೆಗಳನ್ನು ಹೊಂದಿದ್ದು ಮುಂದಿನ ದಿನಗಳಲ್ಲಿ ಜನರ ಬೇಡಿಕೆಗನುಗುಣವಾಗಿ ಹೆಚ್ಚಸಲಾಗುವುದು ಎಂದ ಅವರು ಉನ್ನತ ವ್ಯಾಸಂಗದಲ್ಲಿ ತೊಡಗಿಕೊಳ್ಳುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಸಲುವಾಗಿ ಸಂಸ್ಥೆಯ ಈಗಾಗಲೇ ಆರ್ಥಿಕ ಸಹಾಯ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಅದು ಗರಿಷ್ಠ ಮಟ್ಟದಲ್ಲಿ ದೊರೆಯುವಂತೆ ಮಾಡಲಾಗುವುದು ಎಂದರು.

ಉನ್ನತ ವ್ಯಾಸಂಗದಲ್ಲಿ ತೊಡಗಿಕೊಂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ನಿರ್ದೇಶಕರುಗಳಾದ ಎನ್.ಟಿ. ಪೂಜಾರಿ, ಕೆ. ಶಂಕರ ಪೂಜಾರಿ, ಕೆ. ಶ್ರೀನಿವಾಸ ಪೂಜಾರಿ, ಚಿಕ್ಕು ಪೂಜಾರಿ, ಎನ್. ಅಣ್ಣಪ್ಪ ಬಿಲ್ಲವ, ಜಯಸೂರ್ಯ ಪೂಜಾರಿ, ಕಲ್ಪನಾ ಬಿ. ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಸೊಸೈಟಿಯ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕುಷ್ಠ ಬಿಲ್ಲವ ವಾರ್ಷಿಕ ವರದಿ ವಾಚಿಸಿ, ಧನ್ಯವಾದಗೈದರು.

 

Exit mobile version