Kundapra.com ಕುಂದಾಪ್ರ ಡಾಟ್ ಕಾಂ

ಬಿಜೂರು: ವಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಅದರಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೋಳಿಸುವುದು ಮಹತ್ವವಾಗಿದೆ. ಜನಸಂಖ್ಯೆಯಲ್ಲಿ ಭಾರತ ಮುಂದುವರಿದ ರಾಷ್ಟ್ರವಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿರುವುದು ದುರದೃಷ್ಟಕರ ಎಂದು ತಾಪಂ ಸದಸ್ಯ ಜಗದೀಶ ದೇವಾಡಿಗ ಹೇಳಿದರು.

ಬಿಜೂರು ಪ್ರೌಢ ಶಾಲೆಯಲ್ಲಿ ನಡೆದ ವಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು. ನಮ್ಮಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು ಅವರಿಗೆ ಪ್ರೋತ್ಸಾಹದ ಜತೆ ಸೂಕ್ತ ತರಬೇತಿ ನೀಡುವ ವ್ಯವಸ್ಥೆ ಆಗಬೇಕಾಗಿದೆ. ಗ್ರಾಮೀಣ ಮಟ್ಟದಲ್ಲಿ ಪ್ರತಿಭೆಗಳನ್ನು ಗುರುತಿಸುವ ಮೂಲಕ ಸರಕಾರ ಕ್ರೀಡೆಗಾಗಿ ಪ್ರತೇಕ ಅನುದಾನದ ನೀಡುವ ಅವಶ್ಯಕತೆ ಇದೆ ಎಂದ ಅವರು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳಿಗೆ ಶುಭಕೋರಿದರು.
ಬಿಜೂರು ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣ ಮೂರ್ತಿ ಆಧ್ಯಕ್ಚತೆ ವಹಿಸಿದ್ದರು. ನೂತನವಾಗಿ ನಿರ್ಮಾಣಗೊಂಡ ಪ್ರೌಢ ಶಾಲೆಯ ಅಕ್ಷರದಾಸೋಹ ಕೊಠಡಿಯನ್ನು ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಬಿ. ರಘರಾಮ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೂರು ಗ್ರಾಪಂ ಆಧ್ಯಕ್ಷೆ ಲೋಲಾಕ್ಷಿ ದೇವಾಡಿಗ, ಸದಸ್ಯ ಕೆ.ಟಿ ರಾಜೇಶ, ಬೈಂದೂರು ವಲಯ ದೈಹಿಕ ಶಿಕ್ಷಣ ಪರಿವೀಕ್ಷಕ ರಾಜು ಪೂಜಾರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಅರುಣ ಕುಮಾರ್, ಕುಂದಾಪುರ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ರವಿ ಶೆಟ್ಟಿ, ಗ್ರಾಪಂ ಹೂವಯ್ಯ ಪೂಜಾರಿ, ಉದ್ಯಮಿ ಸುಬ್ರಹ್ಮಣ್ಯ ಬಿಜೂರು, ಮೂಡುರ ಪೂಜಾರಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಅಬ್ದುಲ್ ರವೂಪ್ ಸ್ವಾಗತಿಸಿ, ರತ್ನಕರ ಎಂ. ನಿರೂಪಿಸಿದರು, ಸುಬ್ರಹ್ಮಣ್ಯ ಮದ್ದೊಡಿ ವಂದಿಸಿದರು.

Exit mobile version