ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ಸಂಘದಿಂದ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನದಲ್ಲಿ ವಿಶೇಷ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಿ.ಎ ಶ್ರೀ ವಿಶ್ವಾಸ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ.ಜಿ.ಎಸ್.ಹೆಗಡೆ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಅರ್ಚನಾ ಅರವಿಂದ, ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ಸಂಘದ ಸಂಯೋಜಕಿಯರಾದ ಓಂಶ್ರೀ ಮತ್ತು ಭವ್ಯಾ ಯು.ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಶ್ಲಿನ್ ಕಾರ್ಯಕ್ರಮ ನಿರ್ವಹಿಸಿದರು.ಶೃದ್ಧಾ ಸಾಧನೆಗೈದ ವಿದ್ಯಾರ್ಥಿಗಳ ಹೆಸರನ್ನು ವಾಚಿಸಿದರು. ವಿದ್ಯಾರ್ಥಿ ಪ್ರಥ್ವಿ ವಂದಿಸಿದರು.