Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದ ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದ ಸಮರೋಪ ಸಮಾರಂಭ ಇತ್ತಿಚಿಗೆ ನಡೆಯಿತು.

ಉಡುಪಿ ಜಿಲ್ಲೆ ಕರ್ನಾಟಕದಲ್ಲಿಯೇ ಮಾದರಿ ಜಿಲ್ಲೆ, ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಎಲ್ಲಾ ವಿದ್ಯಾರ್ಥಿಗಳ ಕರ್ತವ್ಯವಾಗಬೇಕು, ಬಹುಮಾನ ಬರಲಿ, ಬಾರದೇ ಇರಲಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯವಾದುದು. ಬಹುಮಾನ ವಿಜೇತ ಎಲ್ಲಾ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಜಿಲ್ಲೆಯ ಕೀರ್ತಿಯನ್ನು ಎತ್ತಿ ಹಿಡಿಯಬೇಕು ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ ಭಂಡಾರ್‌ಕಾರ‍್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಜಿ. ಎಂ. ಗೊಂಡ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಭಂಡಾರ್‌ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್ ಪಿ ನಾರಾಯಣ ಶೆಟ್ಟಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಕೊಡಲಾಗಿದೆ, ಅದರ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು, ಇಂದು ನಡೆದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಯಾಟದಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರುಗಳಿಗೆ ಶುಭ ಹಾರೈಸಿ ಮತ್ತೊಮ್ಮೆ ಬನ್ನಿ ಎಂದು ಸ್ವಾಗತಿಸಿದರು.

ಅತಿಥಿಗಳಾಗಿ ಕಾಲೇಜಿನ ಹಳೆ ವಿದ್ಯಾರ್ಥಿ ಮುನ್ಸಿಪಾರ್ಟಿ ಕೌನ್ಸಿಲರ್ ಸಂದೀಪ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಾರ್ತಿಕೇಯ ಮಧ್ಯಸ್ಥ, ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಶರತ್ ರಾವ್ ಗೌರವ ಅಧ್ಯಕ್ಷರಾದ ವಸಂತ ಶೆಟ್ಟಿ ಉಪಸ್ಥಿತರಿದ್ದರು.

ಭಂಡಾರ್‌ಕಾರ್ಸ್  ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶಂಕರನಾರಾಯಣ ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಕೀರ್ತಿ ಎಸ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದ ಸಮಗ್ರ ಪ್ರಶಸ್ತಿಯನ್ನು ವಿವೇಕ ಪದವಿ ಪೂರ್ವ ಕಾಲೇಜು ಕೋಟ, ರನ್ನರ‍್ಸ್ ಆಫ್ ಪ್ರಶಸ್ತಿಯನ್ನು ಮೂಕಾಂಬಿಕಾ ಪದವಿ ಪೂರ್ವ ಕಾಲೇಜು ಕೊಲ್ಲೂರು ಪಡೆದು ಕೊಂಡಿತು.

Exit mobile version