Kundapra.com ಕುಂದಾಪ್ರ ಡಾಟ್ ಕಾಂ

ಮಹಿಳಾ ಸ್ವರಕ್ಷಣೆ ಕುರಿತು ಪ್ರಾತ್ಯಕ್ಷಿತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ಖ್ಯಾತ ರಾಷ್ಟ್ರ ಮಟ್ಟದ ಕರಾಟೆ ಪಟು ಕಾರ್ತಿಕ್ ಕಟೀಲು ಮತ್ತು ಅವರ ತಾಯಿ ಶೋಭಲತಾ ಕಟೀಲು ಮಹಿಳೆಯರು ಸ್ವರಕ್ಷಣೆ ಮಾಡುವ ಕೆಲವು ಸುಲಭ ಕೌಶಲ್ಯಗಳನ್ನು ಪ್ರಾತ್ಯಕ್ಷಿತೆಯ ಮೂಲಕ ತೋರಿಸಿದರು. ಸುಮಾರು ಏಳು ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿ, ಇದೇ ಸಂದರ್ಭದಲ್ಲಿ ಕಾರ್ತಿಕ್ ಕಟೀಲು ಜೊತೆ ಸಂವಾದ ನಡೆಸಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ, ಲಲಿತ ಕಲಾ ಸಂಘದ ಸಂಯೋಜಕಿ ಸ್ಫೂರ್ತಿ ಎಸ್. ಫೆರ್ನಾಂಡಿಸ್, ಸಹ ಸಂಯೋಜಕಿ ಅನ್ವಿತಾ, ವಿದ್ಯಾರ್ಥಿ ಪ್ರತಿನಿಧಿಗಳಾದ ವೆಂಕಟೇಶ್, ಶಿಲ್ಪಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಶಾಂತಿ ಸ್ವಾಗತಿಸಿದರು, ರಜತ್ ಅತಿಥಿಗಳನ್ನು ಪರಿಚಯಿಸಿದರು, ಬ್ರಿಟಾ ಡಿ’ಸೋಜಾ ವಂದಿಸಿದರು, ವಿಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Exit mobile version