Kundapra.com ಕುಂದಾಪ್ರ ಡಾಟ್ ಕಾಂ

ತಾಲೂಕು ದಸರಾ ಕ್ರೀಡಾಕೂಟ: ಬೈಂದೂರು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಉತ್ತಮ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರೇ, ಕೋ ಕೋ ವಿದ್ಯಾರ್ಥಿನಿಯ ವಿಭಾಗದ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಡಿಸ್ಕಸ್ ತ್ರೋ ವಿಭಾಗದಲ್ಲಿ ತೃತೀಯ ಬಿ.ಎ. ವಿದ್ಯಾರ್ಥಿ ಜಯಂತ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮಣಿಕಂಠ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

Dasara Kridakoota - GFC byndoor

Exit mobile version