Site icon Kundapra.com ಕುಂದಾಪ್ರ ಡಾಟ್ ಕಾಂ

ಕಂಬದಕೋಣೆ ರೈ.ಸೇ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಮಟ್ಟದಲ್ಲಿ ಈ ಬಾರಿ 2 ಪ್ರಶಸ್ತಿಗಳು ಲಭಿಸಿದೆ. ಲೆಕ್ಕಪರಿಶೋಧನಾ ಎ ವರ್ಗದ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ 3 ಆಯ್ದ ಸಹಕಾರಿ ಸಂಘಗಳ ಪೈಕಿ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಒಂದಾಗಿದೆ. ಅದೇ ರೀತಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಮ್.ಎನ್. ರಾಜೇಂದ್ರಕುಮಾರ್ ಇವರು ಸಂಘದ ಅಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ ಪೈ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಮೋಹನ ಪೂಜಾರಿ, ಗುರುರಾಜ್ ಹೆಬ್ಬಾರ್, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಅಶೋಕ ಶೆಟ್ಟಿ, ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ, ವ್ಯವಸ್ಥಾಪಕರಾದ ಹಾವಳಿ ಬಿಲ್ಲವ ಮುಂತಾದವರು ಉಪಸ್ಥಿತರಿದ್ದರು.

Exit mobile version