Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ‘ಹಣಕಾಸು ಉಳಿಕೆ – ಹೂಡಿಕೆ’ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂಸುದ್ದಿ.
ಬೈಂದೂರು: ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯತ್ತಿನಲ್ಲಿ ಹಣಕಾಸಿನ ವಿಚಾರದಲ್ಲಿ ಎಡವದಂತೆ ಮಾರ್ಗದರ್ಶನ ಪಡೆಯುವುದು ಅಗತ್ಯವೆಂದು ನಿಟ್ಟೆ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಪ್ರಾಧ್ಯಾಪಕ ರಾಧಾಕೃಷ್ಣ ಶರ್ಮಾ ಹೇಳಿದರು.

ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ’ಹಣಕಾಸು ಉಳಿಕೆ ಹಾಗೂ ಹೂಡಿಕೆ’ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥಡಾ. ಉಮೇಶ ಮಯ್ಯ ಇವರು ಸಂಯೋಜಿಸಿ ಸ್ವಾಗತಿಸಿದರು. ಅಂತಿಮ ಬಿ.ಕಾಂ ತರಗತಿಯ ಕಿರಣ್ ಧನ್ಯವಾದಗೈದರು.

Exit mobile version