Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಶ್ರೀ ರಾಮ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಉಪಾಧ್ಯಕ್ಷರಾಗಿ ಸತೀಶ್ ಎನ್. ಶೇರೆಗಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಶ್ರೀ ರಾಮ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಲಿ.ನ ಉಪಾಧ್ಯಕ್ಷರಾಗಿ ಉದ್ಯಮಿ ಸತೀಶ್ ಎನ್. ಶೇರೆಗಾರ್ ಆಯ್ಕೆಯಾಗಿದ್ದಾರೆ.
ಶ್ರೀ ರಾಮ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಲಿ.ನ ಉಪಾಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಸುನಿಲ್ ಕುಮಾರ್ ಅವರು ಮುಂದಿನ ಅವಧಿಗೆ ಉಪಾಧ್ಯಕ್ಷರನ್ನಾಗಿ ಸತೀಶ್ ಎನ್. ಶೇರೆಗಾರ್ ಅವರು ಅವಿರೋಧ ಆಯ್ಕೆಯಾಗಿರುವುದನ್ನು ಘೋಷಿಸಿದರು.

ಸತೀಶ್ ಎನ್. ಶೇರೆಗಾರ್ ಅವರು ರೋಟರಿ ವಲಯ ೧ರ ನಿಕಟಪೂರ್ವ ಅಸಿಸ್ಟೆಂಟ್ ಗವರ್ನರ್ ಆಗಿ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಪೂರ್ವಾಧ್ಯಕ್ಷರಾಗಿ ಹಾಗೂ ಕುಂದಾಪುರ ತಾಲೂಕು ಐಸ್ ಪ್ಲ್ಯಾಂಟ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷರಾಗಿ ಅನುಪಮ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿ ಶ್ರೀ ರಾಮ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಲಿ.ಯ ಅಧ್ಯಕ್ಷ ಕೆ. ನಾಗರಾಜ್, ಕಾರ್ಯನಿರ್ವಹಣಾಧಿಕಾರಿ ನಾಗರಾಜ ನಾಯ್ಕ್, ನಿರ್ದೇಶಕರು ಉಪಸ್ಥಿತರಿದ್ದರು.

Exit mobile version