ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತ ದೇಶದ ಸಂಸ್ಕೃತಿ ಹಾಗೂ ಪರಂಪರೆಗೆ ವಿಶ್ವದಲ್ಲಿ ವಿಶೇಷ ಸ್ಥಾನವಿದೆ. ವಿದ್ಯಾರ್ಥಿಗಳು ದೇಶದ ಈ ಎಲ್ಲಾ ಹಿರಿಮೆಗಳನ್ನು ಅರಿತು ಬಾಳಿದರೆ ಭಾರತವು ಇನ್ನಷ್ಟು ಸುಂದರವಾಗಲಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಅವರು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ನಾನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ೭೦ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ’ರಾಷ್ಟ್ರೀಯತೆ ಮತ್ತು ಯುವಜನಾಂಗ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ.ಗೊಂಡ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಅರುಣಾಚಲ ಮಯ್ಯ, ಕಾಲೇಜಿನ ವಿಶ್ವಸ್ಥರಾದ ಶಾಂತಾರಾಮ ಪ್ರಭು, ಪ್ರಜ್ನೇಶ್ ಪ್ರಭು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಅರುಣ ಎ.ಎಸ್ ಹಾಗೂ ರಾಮಚಂದ್ರ ಆಚಾರಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಮಹಾಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿ ಶ್ರೀಲತಾ ಸ್ವಾಗತಿಸಿದರು. ವಿದ್ಯಾರ್ಥಿ ಸಚಿನ್ ವಂದಿಸಿದರು.