Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಬಾಷೆ ಮತ್ತು ಸಾಹಿತ್ಯದ ಬೆಳವಣಿಗೆಯಲ್ಲಿ ಸರ್ವರ ಹಿತವೂ ಅಡಗಿದೆ.ಮಾನವೀಯತೆಯ ಬಾಷೆ ನಮ್ಮದಾಗಬೇಕು.ಸಾಹಿತ್ಯದಿಂದ ಮಹಾಮಾನವರಾಗುವ ಚಮತ್ಕಾರ ಸಾಧ್ಯವಿದೆ. ಮಾತೃಬಾಷೆಯ ಮೇಲಿರುವಷ್ಟೆ ಗೌರವ ಅಭಿಮಾನ ರಾಷ್ಟ್ರಬಾಷೆಯ ಬಗೆಗೆ ಕೂಡ ಇರಬೇಕು ಎಂದು ಕುಂದಾಪುರದ ಭಂಡಾರ್‌ಕರ‍್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ. ಎಮ್. ಗೊಂಡ ಅಭಿಪ್ರಾಯಪಟ್ಟರು.

ಅವರು ಗಂಗೊಳ್ಳಿಯ ರೋಟರಿ ಸಭಾಂಗಣದಲ್ಲಿ ಭಾರತ ಸರಕಾರದ ಯುವ ಕಾರ‍್ಯಾಲಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ (ರಿ)ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹಿಂದಿ ದಿನಾಚರಣೆ ಕಾರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ನಮ್ಮ ದಿನನಿತ್ಯದ ಪ್ರಾರ್ಥನೆಯಲ್ಲಿ ನಮ್ಮ ದೇಶ ಭಾಷೆಯನ್ನು ಉಳಿಸುವ ಕಾಯುವ ಸೈನಿಕರನ್ನು ಸ್ಮರಿಸಿಕೊಳ್ಳಬೆಕು ಅವರ ಕ್ಷೇಮಕ್ಕಾಗಿ ಪ್ರಾರ್ಥಿಸಬೇಕು ಎಂದು ಅವರು ಹೇಳಿದರು, ಸರಸ್ವತಿ ವಿದ್ಯಾಲಯದ ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ,ಯುವಕ ಮಂಡಲದ ಅಧ್ಯಕ್ಷ ಕಿರಣ್ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಮ್ ಸಿ ಸ್ವಾಗತಿಸಿದರು.ವಿದ್ಯಾರ್ಥಿನಿ ಪೂಜಾ ಅತಿಥಿಗಳನ್ನು ಪರಿಚಯಿಸಿದರು. ದಿಶಾ ಪ್ರಾರ್ಥಿಸಿದರು.ಯುವಕ ಮಂಡಲದ ಸ್ಥಾಪಕ ಅಧ್ಯಕ್ಷ ಭಾಸ್ಕರ ಹೆಚ್ ಜಿ ಅವರು ವಂದಿಸಿದರು.

ವರದಿ : ನರೇಂದ್ರ ಎಸ್ ಗಂಗೊಳ್ಳಿ.

Exit mobile version