Kundapra.com ಕುಂದಾಪ್ರ ಡಾಟ್ ಕಾಂ

ಮೌನಕ್ರಾಂತಿ ಮೂಲಕ ಸಾಮಾಜಿಕ ನ್ಯಾಯ ನೀಡಿದ ಶ್ರೇಷ್ಠ ಶ್ರೀ ನಾರಾಯಣಗುರು

?????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎಲ್ಲೆಲ್ಲೂ ಅಸ್ಪೃಷ್ಯಹತೆ ತಾಂಡವಾಡುತ್ತಿದ್ದ ಕಾಲಘಟ್ಟದಲ್ಲಿ ಅವರ್ಣಿಯರು ದೇವಸ್ಥಾನ ಪ್ರವೇಶ ನಿಷೇಧ ನಡುವೆಯೂ ದೇವಸ್ಥಾನಗಳ ಸ್ಥಾಪಿಸಿ, ಮೌನ ಕ್ರಾಂತಿ ಮೂಲಕ ಸಾಮಾಜಿಕ ನ್ಯಾಯ ಎತ್ತಿಹಿಡಿದ ಮಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಕುಂದಾಪುರ ತಾಲೂಕು ಆಡಳಿತ, ರಾಷ್ರೀಯ ಹಬ್ಬಗಳ ದಿನಾಚರಣಾ ಸಮಿತಿ, ಕುಂದಾಪುರ ತಾಲೂಕು ಪಂಚಾಯತ್ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಶ್ರೀ ನಾರಾಯಣಗುರು ಜಯಂತಿ ಉದ್ಘಾಟಿಸಿ, ಮಾತನಾಡುತ್ತಿದ್ದರು.

ಶ್ರೀ ನಾರಾಯಣ ಗುರು ಬಿಲ್ಲವ ಸಮುದಾಯಕ್ಕೆ ಸೀಮಿತವಾಗಿರದೆ, ದೀನ-ದಲಿತರ, ಹಿಂದುಳಿದವರ ಗುರುವಾಗಿದ್ದರು. ಶಿಕ್ಷಣಿಕ, ಸಮಾಜಿಕ ಹಾಗೂ ಆರ್ಥಿಕ ಪರಿವರ್ತನೆ ಮೂಲಕ ಸಮಾಜಕ್ಕೆ ಸಮಾನತೆ ಸಾರಾ ಬೋಧಿಸಿದರು. ಅವರ ತತ್ವ ಸಿದ್ದಾಂತ ಬದುಕಿನಲ್ಲಿ ಅಳವಡಿಸಿಕೊಂಡು ನಡೆದಾಗ ಮಾತ್ರ ಅದಕ್ಕೊಂದು ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಸರಕಾರ ವತಿಯಿಂದ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ಅಭಿನಂದೀಯ ಎಂದರು.

ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಜಯಶ್ರೀ ಸುಧಾಕರ ಮೊಗವೀರ, ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಮೋಹನ್ ಸಾರಂಗ, ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಹಿರಿಯಣ್ಣ, ಕುಂದಾಪುರ ತಾಪಂ. ಉಪಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಕಡ್ಕೆ, ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಲಕ್ಷೀ ಮಂಜು ಬಿಲ್ಲವ, ಕುಂದಾಪುರ ಡಿಎಸ್ಪಿ ಪ್ರವೀಣ್ ಎಚ್.ನಾಯ್ಕ್, ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಅಧ್ಯಕ್ಷ ಜಿ.ಎಂ. ಬೋರ್ಕರ್, ಕುಂದಾಪುರ ತಾಪಂ ಇಒ ರಾಮಚಂದ್ರರಾಜೇ ಅರಸ್, ಕುಂದಾಪುರ ಬಿಲ್ಲವ ಸಂಘ ಉಪಾಧ್ಯಕ್ಷ ರಾಜೀವ ಕೋಟ್ಯಾನ್ ಇದ್ದರು. ಬಿಲ್ಲವ ಹಿರಿಯ ಮುಖಂಡ ನಾರಾಯಣ ಬಿಲ್ಲವ ಪ್ರಾರ್ಥಿಸಿದರು. ಕುಂದಾಪುರ ಅಕ್ಷರದಾಸೋಹ ಅಧಿಕಾರಿ ಸೀತಾರಾಮ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಕುಂದಾಪುರ ಬಿಸಿಎಂ ಹಾಸ್ಟಲ್ ನರಸಿಂಹ ಪೂಜಾರಿ ನಿರೂಪಿಸಿದರು.

Exit mobile version