Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಂದಿನ ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ದುಶ್ಚಟಗಳು ನಮ್ಮ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಯುವಜನರು ತಮ್ಮ ಉತ್ತಮ ಉಜ್ವಲ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರುವ ಬಗ್ಗೆ ಮತ್ತು ದುಶ್ಚಟಗಳನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಂಗೊಳ್ಳಿ ಕಾರ್ಯಕ್ಷೇತ್ರದ ಸಹಕಾರದೊಂದಿಗೆ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಜಾಗೃತಿ ವೇದಿಕೆ ತ್ರಾಸಿ ವಲಯ ಅಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸತೀಶ ಎಂ.ನಾಯಕ್ ಅವರು ಮಾಹಿತಿ ನೀಡಿದರು. ಜನಜಾಗೃತಿ ವೇದಿಕೆ ತ್ರಾಸಿ ವಲಯದ ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ, ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ ಆಚಾರ್ಯ ತ್ರಾಸಿ, ಸ್ವಸಹಾಯ ಸಂಘಗಳ ಒಕ್ಕೂಟದ ತ್ರಾಸಿ ವಲಯದ ಮಾಜಿ ಅಧ್ಯಕ್ಷ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಗಳಾದ ವನಜ ಸ್ವಾಗತಿಸಿದರು. ರಾಧಾ ವಂದಿಸಿದರು.

Exit mobile version