Site icon Kundapra.com ಕುಂದಾಪ್ರ ಡಾಟ್ ಕಾಂ

ಶುಭದಾ ಆಂಗ್ಲ ಮಾಧ್ಯಮ ಶಾಲೆ: ಗುರುವಂದನಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ’ಗುರುವಂದನಾ’ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಮಂಗೇಶ್ ಶೆಣೈ ಯಳಜಿತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಒಂದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಯಾವ ರೀತಿ ಗುರುಗಳು ಕಾರಣಿಭೂತರಾಗಿರುತ್ತಾರೆ ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಶಾಲೆಯ ಸಂಸ್ಥಾಪಕರಾದ ಡಾ. ಎನ್. ಕೆ. ಬಿಲ್ಲವ, ಶಾಲಾ ಸಂಚಾಲಕರಾದ ಶಂಕರ ಪೂಜಾರಿ, ಮುಖ್ಯೋಪಾಧ್ಯಾಯ ಪ್ರವೀಣ ಕುಮಾರ್ ಕೆ.ಪಿ., ಮೇಲ್ವಿಚಾರಕ ಎ.ಬಿ.ಪೂಜಾರಿ ಉಪಸ್ಥಿತರಿದ್ದರು ಗುರುವಂದನಾ ಕಾರ್ಯಕ್ರಮದ ಬಗ್ಗೆ ಕು. ಗೀತಾ ಆಚಾರ್ಯ ಪ್ರಾಸ್ತಾವಿಕ ನುಡಿಯನ್ನಾಡಿದರು. ಪಲ್ಲವಿ ಆಚಾರ್ಯ ಸ್ವಾಗತಿಸಿ, ರೇಷ್ಮಾ ಧನ್ಯವಾದಗೈದುರು. ಶಿಕ್ಷಕ ಗೋವಿಂದರಾಜ್ ನಿರೂಪಿಸಿದರು.

Exit mobile version