Site icon Kundapra.com ಕುಂದಾಪ್ರ ಡಾಟ್ ಕಾಂ

ನಾಗೇಶ್ ಶ್ಯಾನುಭಾಗ್‌ರಿಗೆ ‘ಆದರ್ಶ ಶಿಕ್ಷಕ’ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಆದರ್ಶ ಆಸ್ಪತ್ರೆ, ಉಡುಪಿ ಆಶ್ರಯದಲ್ಲಿ ಡಾ|| ಸರ್ವಪಳ್ಳಿ ರಾಧಾಕೃಷ್ಣನ್‌ರವರ ಜನ್ಮಜಯಂತಿ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಅನುಪಮ ಸೇವೆಯನ್ನು ಗುರುತಿಸಿ ಕುಂದಾಪುರ ತಾಲೂಕಿನ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗೇಶ್ ಶ್ಯಾನುಭಾಗ್ ಅವರಿಗೆ ’ಆದರ್ಶ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬಂಟ್ವಾಡಿಯ ಶಾಲೆಯಲ್ಲಿ ಕಳೆದ 34 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಶಾಲೆಯ ಬೆಳವಣಿಗೆ, ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸದಲ್ಲಿ ಅತ್ಯುತ್ತಮ ಪಾತ್ರ ನಿರ್ವಹಿಸಿದ ಹಿನ್ನಲೆಯಲ್ಲಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Exit mobile version