Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಚಲಿಸುತ್ತಿದ್ದ ಬಸ್ ಮೇಲೆರಗಿದ ಭಾರಿ ಗಾತ್ರದ ಮರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಂಗೊಳ್ಳಿ ರಾಮಮಂದಿರ ರಸ್ತೆಯ ಬದಿಯಲ್ಲಿದ್ದ ಭಾರಿಗಾತ್ರದ ಮರವೊಂದು ಧರಾಶಾಹಿಯಾಗಿದ್ದು ಮರದ ಕೆಳಕ್ಕೆ ನಿಲ್ಲಿಸಲಾಗಿದ್ದ ಲಾರಿ ಹಾಗೂ ಗಂಗೊಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಮೇಲೆರಗಿ ವಾಹನಗಳನ್ನು ಜಖಂಗೊಳಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಮಮಂದಿರದ ಬಳಿ ಇದ್ದ ಭಾರಿ ಗ್ರಾತ್ರದ ಆಲದ ಮರವು ಭಾರ ತಡೆಯಲಾಗದೆ ನೆಲಕ್ಕುರುಳಿದೆ ಎನ್ನಲಾಗಿದೆ. ಮರದ ಕೆಳಕ್ಕೆ ನಿಲ್ಲಿಸಲಾಗಿದ್ದ ಲಾರಿ ಮೇಲೆ ಬಿದ್ದು ನಂತರ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ಸಿನ ಮೇಲೆ ಬಿದ್ದಿದ್ದರಿಂದ ಬಸ್ಸಿನಲ್ಲಿದ್ದ ನಲವತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ.  ಘಟನೆಯಿಂದ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ರಸ್ತೆ ತಡೆ ಉಂಟಾಯಿತು. ಬಳಿಕ ಸ್ಥಳೀಯ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು/ ಕುಂದಾಪ್ರ ಡಾಟ್ ಕಾಂ ಸುದ್ದಿ/

Exit mobile version