Kundapra.com ಕುಂದಾಪ್ರ ಡಾಟ್ ಕಾಂ

ಖಾಲಿ ಹೊಟ್ಟೆಯಲ್ಲಿ ಕುಡಿಯುವ ನೀರು ಆರೋಗ್ಯ ವೃದ್ಧಿಗೆ ಸಹಕಾರಿ!

ಕುಂದಾಪ್ರ ಡಾಟ್ ಕಾಂ ಲೇಖನ
ನೀರು ನಿಮ್ಮ ಹೆಚ್ಚಿನೆಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು. ಮುಂಜಾನೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಹಲವಾರು ರೋಗಗಳನ್ನು ಗುಣಪಡಿಸಬಹುದು ಎಂದು ತಿಳಿದಿದೆಯಾ? ಹೆಚ್ಚಿನ ರೋಗಗಳು ಹೊಟ್ಟೆಯಿಂದಲೇ ಆರಂಭವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗ ನಿಮ್ಮ ಹೊಟ್ಟೆಯನ್ನು ಆರೋಗ್ಯವಾಗಿರಿಸಲು ಇದು ನೆರವಾಗಲಿದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಯೋಚನೆಯು ಮೊದಲು ಆರಂಭವಾಗಿದ್ದು ಜಪಾನ್ ನಲ್ಲಿ. ಜಪಾನಿನಲ್ಲಿ ಜನರು ಹಲ್ಲುಜ್ಜುವ ಮೊದಲು ನಾಲ್ಕು ಲೋಟ ನೀರು ಕುಡಿಯುತ್ತಾರೆ. ಉಪ್ಪು ಬೆರೆಸಿದ ಬೆಚ್ಚನೆಯ ನೀರು, ಆಯಸ್ಸು ನೂರು! ಇದರ ಬಳಿಕ ಅವರು ಅರ್ಧ ಗಂಟೆ ಏನೂ ತಿನ್ನುವುದಿಲ್ಲ ಅಥವಾ ಕುಡಿಯುವುದಿಲ್ಲ. ಈ ನೀರಿನ ಥೆರಪಿ ನಿಮ್ಮನ್ನು ಆರೋಗ್ಯಕರ ಹಾಗೂ ಚಟುವಟಿಕೆಯಿಂದಿಡುತ್ತದೆ. ಜಪಾನ್ ನ ಜನರು ವಿಶ್ವದಲ್ಲೇ ಅತ್ಯಂತ ಹೆಚ್ಚು ಚಟುವಟಿಕೆ ಹಾಗೂ ದಕ್ಷತೆಯನ್ನು ಹೊಂದಿರುವವರೆಂಬ ಹೆಗ್ಗಳಿಕೆಯಿದೆ.

ಬೆಳ್ಳಂ ಬೆಳಿಗ್ಗೆ ಎದ್ದು ಎಳೆ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಹಲವಾರು ರೀತಿಯ ಉಪಯೋಗಗಳಿವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೀರು ಜಾದು ಮಾಡಬಲ್ಲದು. ನೀವು ಊಟವಾದ ಬಳಿಕ ಬಿಸಿ ನೀರು ಕುಡಿಯಿರಿ. ಇದರಿಂದ ನೀವು ತಿಂದ ಆಹಾರದಲ್ಲಿರುವ ಎಣ್ಣೆ ಕೊಬ್ಬಾಗಿ ಪರಿವರ್ತಿತವಾಗುವುದಿಲ್ಲ. ಬೆಳಗ್ಗಿನ ಅವಧಿಯಲ್ಲಿ ಬಿಸಿನೀರು ಕುಡಿಯಲು ಪ್ರಯತ್ನಿಸಿ. ಬೆಳಗ್ಗಿನ ವೇಳೆ ಬಿಸಿ ನೀರು ಕುಡಿದರೆ ಆಗುವ ಅದ್ಭುತ ಆರೋಗ್ಯ ಲಾಭಗಳು ಇಲ್ಲಿವೆ. ಕುಂದಾಪ್ರ ಡಾಟ್ ಕಾಂ ಲೇಖನ.

Exit mobile version