ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯುವಜನತೆ ಆಲೋಚನೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಇದು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಯುವಜನತೆಯನ್ನು ಪ್ರಜ್ಞಾವಂತ ನಾಗರಿಕರನ್ನಾಗಿ ರೂಪಿಸುತ್ತದೆ. ಯುವಜನತೆ ಸಂವಿಧಾನಾತ್ಮಕ ತತ್ವ, ಮಾನವೀಯ ಮೌಲ್ಯಗಳನ್ನು ನೈಜ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ, ಸದೃಢ ರಾಷ್ಟ್ರ ನಿರ್ಮಾಣದ ಕುರಿತು ವೈಯಕ್ತಿಕ ನೆಲೆಯಲ್ಲಿ ಚಿಂತಿಸಬೇಕು ಎಂದು ಭಾರತೀಯ ವಿದೇಶಾಂಗ ಸೇವೆಯ ನಿವೃತ್ತ ಅಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು.
ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಿ. ಎಮ್. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಪ್ರೊ. ಎ. ಪಿ. ಮಿತ್ತಂತ್ತಾಯ, ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ ಉಪಸ್ಥಿತರಿದ್ದರು.
ಕಾಲೇಜು ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್ ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗ ಉಪನ್ಯಾಸಕಿ ವನಿತಾ ಜಿ. ಭಂಡಾರಿ ಅತಿಥಿಗಳ ಪರಿಚಯಿಸಿದರು. ವಾಣಿಜ್ಯ ಉಪನ್ಯಾಸಕ ಜಯಶೀಲ್ ಕುಮಾರ್ ನಿರೂಪಿಸಿದರು. ವಾಣಿಜ್ಯ ಉಪನ್ಯಾಸಕ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು.