Site icon Kundapra.com ಕುಂದಾಪ್ರ ಡಾಟ್ ಕಾಂ

ಭಗತ್ ಸಿಂಗ್ ಜನ್ಮದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ನಮ್ಮಲ್ಲಿನ ಲೋಪ ದೋಷಗಳನ್ನು ಸರಿಮಾಡಿಕೊಂಡು ಬಲಿಷ್ಠ ಸಂಘಟನೆಯಾಗುವತ್ತ ನಾವು ಗಮನ ಹರಿಸಬೇಕು. ಆಗ ಮಾತ್ರ ಭಗತ್ ರಂತವರ ಆದರ್ಶಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯ ಎಂದು ಗಂಗೊಳ್ಳಿಯ ಉದ್ಯಮಿ ವಿಠಲ್ ಶೆಣೈ ಹೇಳಿದರು.

ಅವರು ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿನ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಭಗತ್‌ಸಿಂಗ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ರ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ‍್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದರು.

ಉಮನಾಥ ದೇವಾಡಿಗ ಭಗತ್‌ಸಿಂಗ್‌ರ ಆದರ್ಶಗಳ ಕುರಿತು ತಿಳುವಳಿಕೆ ನೀಡಿದರು. ಯಶವಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ‍್ಯಕ್ರಮದಲ್ಲಿ ಭಗತ್‌ಸಿಂಗ್‌ರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಭಗತ್‌ಸಿಂಗ್ ಅಭಿಮಾನಿ ಬಳಗದ ಅಧ್ಯಕ್ಷ ಸುಬ್ರಮಣ್ಯ ಸ್ವಾಗತಿಸಿದರು. ಅರುಣ, ಕಿರಣ್, ರಂಜಿತ್, ರಾಘವೇಂದ್ರ, ಮೋಹನ ಮೊದಲಾದವರು ಉಪಸ್ಥಿತರಿದ್ದರು.ಅನಿಲ್ ವಂದಿಸಿದರು.

ವರದಿ : ನರೇಂದ್ರ ಎಸ್ ಗಂಗೊಳ್ಳಿ.

Exit mobile version