Site icon Kundapra.com ಕುಂದಾಪ್ರ ಡಾಟ್ ಕಾಂ

ವಕ್ವಾಡಿ ಗುರುಕುಲದಲ್ಲಿ ಪುಷ್ಪಗಳ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಟೇಶ್ವರ ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಮಕ್ಕಳು ’ಪುಷ್ಪಗಳ ದಿನಾಚರಣೆ’ ಸಂಭ್ರಮದಿಂದ ಆಚರಿಸಿದರು. ಪುಟಾಣಿ ಮಕ್ಕಳು ವಿವಿಧ ಬಗೆಯ ಆಕರ್ಷಕ ಹೂಗಳನ್ನು ತರುವುದರ ಜೊತೆಗೆ ರಂಗು ರಂಗಿನ ಉಡುಪು ಧರಿಸಿ ಸಂಭ್ರಮಿಸಿದರು. ಈ ದಿನದ ವಿಶೇಷವಾಗಿ ಪ್ರಾಥಮಿಕ ಕಟ್ಟಡವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು. ಶಿಕ್ಷಕಿಯರು ಹೂಗಳ ಉಪಯೋಗ ಮತ್ತು ಮಹತ್ವದ ಕುರಿತು ಸವಿಸ್ತಾರ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಜೊತೆಗೆ ಪುಟಾಣಿ ಮಕ್ಕಳು ತಮ್ಮ ಪುಟಾಣಿ ಕೈಗಳಿಂದ ಆಕರ್ಷಕ ಹೂವಿನ ರಂಗೋಲಿಯನ್ನು ಬಿಡಿಸುವ ಮೂಲಕ ಪುಷ್ಪಗಳ ದಿನಾಚರಣೆಗೆ ಇನ್ನಷ್ಟು ಮೆರಗು ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮ ಎಸ್. ಶೆಟ್ಟಿ ಹಾಗೂ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Exit mobile version