Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಶ್ರೀ ಬಗಳಾಂಬ ತಾಯಿ ಸನ್ನಿಧಿಯಲ್ಲಿ ಶರನ್ನವರಾತ್ರಿ ವಿಶೇಷ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಅ.೦೧ರಿಂದ ಶರನ್ನವರಾತ್ರಿ ಉತ್ಸವವು ಆರಂಭವಾಗಲಿದ್ದು ಅ.೧೧ರವರೆಗೆ ನಡೆಯಲಿದೆ.

ಶ್ರೀ ಗುರು ಪರಾಶಕ್ತಿ ಮಠ ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ಬ್ರಹ್ಮಶ್ರೀ ವೇ. ಮೂ. ಕೋಟ ಚಂದ್ರಶೇಖರ ಸೋಮಯಾಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ಸಂಪನ್ನಗೊಳ್ಳಲಿದೆ. ಅ.೦೧ರಂದು ಕಲಶ ಸ್ಥಾಪನೆ ಪೂಜೆಯಿಂದ ಆರಂಭಗೊಂಡು ಪ್ರತಿದಿನ ವಿಶೇಷ ಪೂಜೆ, ಸಂಜೆ ಭಜನೆ, ಅ.೦೯ರಂದು ಬೆಳಿಗ್ಗೆ ಪುಣ್ಯಾಹ ಗಣಪತಿ ಪೂಜೆ, ಚಂಡಿಕಾಯಾಗ, ಮಹಾಪೂಜೆ, ಅನ್ನಸಂತರ್ಪಣೆ ಜರುಗಲಿರುವುದು. ಅ.೧೧ರಂದು ಕಲಶ ವಿಸರ್ಜನಾ ಪೂಜೆ ನಡೆಯಲಿದೆ.

Exit mobile version