ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯುವ ಛಾಯಾಚಿತ್ರಕಾರ ನಿತೀಶ್ ಪಿ. ಬೈಂದೂರು ತಮ್ಮ ವಿದ್ಯಾರ್ಥಿ ದಿನಗಳಲ್ಲಿಯೇ ಛಾಯಾಗ್ರಹಣ ಕ್ಷೇತ್ರದಲ್ಲಿ ತೋರುತ್ತಿರುವ ಸಾಧನೆಯನ್ನು ಪರಿಗಣಿಸಿ ಇತ್ತಿಚಿಗೆ ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಪ್ರೊಫೆಶನಲ್ ಮತ್ತು ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕಾರ್ಕಳ ತಾಲೂಕು, ಅಜೆಕಾರು ಹೋಬಳಿ ಘಟಕ ಸಹಕಾರದಲ್ಲಿ ಡಾ| ಕೋಟ ಶಿವರಾಮ ಕಾರಂತರ ನೆನಪಲ್ಲಿ ಮಿತ್ರಮಂಡಳಿ ಕೋಟ ಆಯೋಜಿಸಿದ ವಿಂಶತಿ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದಲ್ಲಿ ‘ಡಾ. ಕೋಟ ಶಿವರಾಮ ಕಾರಂತ ವಿದ್ಯಾರ್ಥಿ ಗೌರವ’ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ನಕ್ರೆ ಜಾರ್ಜ್ ಕ್ಯಾಸ್ತೆಲಿನೋ, ಮಹಮ್ಮದಾಲಿ ಅಬ್ಬಾಸ್, ಶ್ರೀವರ್ಮ ಅಜ್ರಿ, ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಗಿರಿಧರ ನಾಯಕ್, ಯೋಗೀಶ್ ಡಿ.ಎಚ್, ಸಮದ್ ಖಾನ್, ಪಂಚಮಿ ಮಾರೂರು, ರಕ್ಷಾ ಆರ್.ಶೆಣೈ, ಆಶ್ವಿತಾ ಎಂ. ಉಪಸ್ಥಿತರಿದ್ದರು. ಪತ್ರಕರ್ತ, ಸಂಘಟಕ ಶೇಖರ ಅಜೆಕಾರು ಕಾರ್ಯಕ್ರಮ ಸಂಘಟಿಸಿದರು.