Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ದೇವಳಕ್ಕೆ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಪತ್ನಿ ಸಮೇತರಾಗಿ ಶುಕ್ರವಾರ ಕೊಲ್ಲೂರು ಕ್ಷೇತ್ರಕ್ಕೆ ಭೇಟಿನೀಡಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು. ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಚಂಡಿಕಾಹೋಮ ಸೇವೆ ಮಾಡಿಸಿದರು. ಈ ಸಂದರ್ಭ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಕೃಷ್ಣಪ್ಪ ದಂಪತಿಗಳು, ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ದಂಪತಿಗಳು, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ, ಕ್ಷೇತ್ರ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ತೋಳಾರ್ ಕೊಲ್ಲೂರು, ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆಂಚನೂರು ರವಿ ಗಾಣಿಗ ಮತ್ತಿತರರು ಜತೆಯಲ್ಲಿದ್ದರು. ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಮಾಜಿ ಸಚಿವರನ್ನು ದೇವಳದವತಿಯಿಂದ ಗೌರವಿಸಿದರು.

Exit mobile version