Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ವಿ ಪದವಿಪೂರ್ವ ಕಾಲೇಜಿನ ರಾ.ಸೇ.ಯೋ ಶಿಬಿರ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪರಾಥಮಿಕ ಶಾಲೆಯಲ್ಲಿ ೭ ದಿನ ನಡೆದ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ನಡೆಯಿತು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಷಿ ಸಮಾರೋಪ ಭಾಷಣ ಮಾಡಿದರು.

’ಮಕ್ಕಳ ಮುಗ್ಧತೆ ಒಂದು ಸಂಪತ್ತು. ಅದನ್ನು ಯಾವತ್ತೂ ಕಳೆದುಕೊಳ್ಳಬಾರದು. ಕೀಳರಿಮೆಯಿಂದ ಮುಕ್ತರಾಗಿ, ಕರ್ತವ್ಯ ಪ್ರಜ್ಞೆ ಬೆಳೆಸಿಕೊಂಡು, ಭವಿಷ್ಯದ ಬಗ್ಗೆ ಚಿಂತಿಸಿ ಕಾರ್ಯಪ್ರವೃತ್ತರಾದರೆ ಬದುಕಿನಲ್ಲಿ ಯಶಸ್ಸು ಖಚಿತ’ ಎಂದು ಅವರು ಹೇಳಿದರು. ಪ್ರಾಂಶುಪಾಲ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿದ್ದ ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ನಿವೃತ್ತ ಪ್ರಾಂಶುಪಾಲ ಎಂ. ಶಂಕರ ಖಾರ್ವಿ, ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ, ಕಾಲೇಜು ಆಡಳಿತ ಸಮಿತಿಯ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಶುಭ ಹಾರೈಸಿದರು.

ರಾಜ್ಯಶಾಸ್ತ್ರ ಉಪನ್ಯಾಸಕ ಅರುಣಕುಮಾರ ಸ್ವಾಗತಿಸಿದರು. ಶಿಬಿರಾರ್ಥಿ ನಾಗರಾಜ ಶಿಬಿರದ ಅನುಭವ ಹಂಚಿಕೊಂಡರು. ಯೋಜನಾಧಿಕಾರಿ ನಾರಾಯಣ ಇ. ನಾಯ್ಕ್ ವಂದಿಸಿದರು. ಸಂಸ್ಕೃತ ಉಪನ್ಯಾಸಕ ವೆಂಕಟೇಶಮೂರ್ತಿ ಎನ್. ಸಿ. ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ನಿರೂಪಿಸಿದರು.

Exit mobile version