ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ಘಟಕ ಏರ್ಪಡಿಸಿದ್ದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಅತ್ಯುತ್ತಮ ವಾರ್ಷಿಕಾಂಕ ಗೌರವವನ್ನು ಪಡೆದುಕೊಂಡಿದೆ.ನವೆಂಬರ್ ೧೯ ರಂದು ಕುಂದಾಪುರದ ಭಂಡಾರ್‌ಕರ್ಸ್ ಕಾಲೇಜಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪುರಸ್ಕಾರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.