Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಸಚಿವ ಸೇಠ್ ರಾಜೀನಾಮೆಗೆ ಎಬಿವಿಪಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಯಚೂರಿನಲ್ಲಿ ನಡೆಯುತ್ತಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಆರೋಪ ಎದುರಿಸುತ್ತಿರುವ ಫ್ರೌಡಶಾಲಾ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕುಂದಾಪುರ ವಿವಿಧ ಕಾಲೇಜಿನ ಎಬಿವಿಪಿ ಮುಂದಾಳುಗಳು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಶಿಕ್ಷಣ ಸಚಿವರಾಗಿದ್ದುಕೊಂಡೇ ಇಂತಹ ಕೃತ್ಯಗಳಲ್ಲಿ ತೊಡಗಿಕೊಂಡಿರುವುದು ಆಘಾತಕಾರಿಯಾಗಿದ್ದು ಕೂಡಲೇ ನೈತಿಕ ಹೊಣೆ ಹೊತ್ತು ಅವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕುಂದಾಪುರ ತಹಶೀಲ್ದಾರ್ ಜಿ.ಎಂ.ಬೋರ್ಕರ್ ಮನವಿ ಸ್ವೀಕರಿಸಿದರು.

Exit mobile version