Kundapra.com ಕುಂದಾಪ್ರ ಡಾಟ್ ಕಾಂ

ಗುರುಕುಲ ಪಬ್ಲಿಕ್ ಸ್ಕೂಲ್: ಸಾಂಸ್ಕ್ರತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ೧೧ನೇ ವಾರ್ಷಿಕೋತ್ಸವದ ಅಂಗವಾಗಿ ೨೦೧೬-೧೭ನೇ ಸಾಲಿನ ಸಾಂಸ್ಕ್ರತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ನೀಡಿ ವಿತರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಆಸರೆ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯಸ್ಥೆ ಡಾ. ಆಶಾಜ್ಯೋತಿ ರೈ ರವರು ಮಾತನಾಡಿ ಋಗ್ವೇದದಲ್ಲಿ ಹೇಳಿರುವಂತೆ ಶಿಕ್ಷಣವು ವಿದ್ಯಾರ್ಥಿಗಳಿಗೆ ಸಂಸ್ಕ್ರತಿಯನ್ನು ಪ್ರತಿಬಿಂಬಿಸುವ ದಾರಿ ದೀಪವಾಗಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಮಹತ್ವಾಕಾಂಕ್ಷೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಪಾಲಕ ಶಿಕ್ಷಕರೀರ್ವರು ವಿದ್ಯಾರ್ಥಿಗಳನ್ನು ಕೇವಲ ಹಣಕ್ಕಾಗಿ ವೃತ್ತಿಯನ್ನು ಮಾಡಲು ಪ್ರೇರೇಪಿಸದೇ, ಸಮಾಜದ ಮೌಲ್ಯಗಳನ್ನು ಆದರ್ಶಗಳನ್ನು ಹೊತ್ತು ಸಾಗುವ ವಾಹಕಗಳನ್ನಾಗಿ ರೂಪಿಸಬೇಕು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಂಡ್ಯ ಎಜುಕೇಶನ್ ಟ್ರಸ್ಟ್‌ನ ಜಂಟಿ ಕಾರ್ಯ ನಿರ್ವಹಕಿ ಅನುಪಮ.ಎಸ್.ಶೆಟ್ಟಿ ಮಾತನಾಡಿ ಅತಿಯಾದ ಪ್ರೀತಿಯಿಂದ ಮಕ್ಕಳನ್ನು ದುರ್ಬಲರನ್ನಾಗಿ ಮಾಡದೇ ಸ್ವಾಭಾವಿಕವಾಗಿ ಮಕ್ಕಳನ್ನು ಬೆಳೆಯಲು ಅನುವು ಮಾಡಿಕೊಡಬೇಕು ಎಂದು ಪಾಲಕರಿಗೆ ಸಂದೇಶವನ್ನು ನೀಡಿದರು.

ಬಾಂಡ್ಯ ಎಜ್ಯುಕೇಶನ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಹಣಾಧಿಕಾರಿ ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲ ಚೆನ್ನಬಸಪ್ಪ ಅತಿಥಿಗಳನ್ನು ಸ್ವಾಗತಿಸಿದರು. ಗುರುಕುಲ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಶಾಯಿಜು ಕೆ.ಆರ್.ನಾಯರ್ ಅತಿಥಿಗಳನ್ನು ಪರಿಚಯಿಸಿದರು. ಉಪ ಪ್ರಾಂಶುಪಾಲೆ ಸುನಂದಾ ಪಾಟೀಲ್ ವಂದಿಸಿದರು. ಬಬಿತ ಶೆಟ್ಟಿ ನಿರೂಪಿಸಿದರು.

Exit mobile version