Site icon Kundapra.com ಕುಂದಾಪ್ರ ಡಾಟ್ ಕಾಂ

ಕೆನರಾ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಕೆನರಾ ಬ್ಯಾಂಕಿನ ಎರಡನೇ ಶಾಖೆಯಾಗಿರುವ ಗಂಗೊಳ್ಳಿ ಶಾಖೆಯಲ್ಲಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಇತರ ಬ್ಯಾಂಕುಗಳಿಗೆ ಹೋಲಿಸಿದರೆ ಗಂಗೊಳ್ಳಿ ಶಾಖೆಯು ಅತಿ ಹೆಚ್ಚು ವ್ಯವಹಾರ ನಡೆಸುತ್ತಿರುವುದು ಶ್ಲಾಘನೀಯ. ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸೇವೆ ನೀಡುವ ಮೂಲಕ ಕೆನರಾ ಬ್ಯಾಂಕ್ ಜನಮಾನಸದಲ್ಲಿ ಉಳಿದುಕೊಳ್ಳಲು ಸಹಾಯಕವಾಗಿದೆ. ಬ್ಯಾಂಕಿನ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಕನಸನ್ನು ನನಸು ಮಾಡುತ್ತಿರುವ ಕೆನರಾ ಬ್ಯಾಂಕ್ ದೇಶದ ಅಗ್ರಮಾನ್ಯ ಬ್ಯಾಂಕುಗಳಲ್ಲಿ ಒಂದಾಗಿದೆ ಎಂದು ಪತ್ರಕರ್ತ ಬಿ.ರಾಘವೇಂದ್ರ ಪೈ ಹೇಳಿದರು.

ಅವರು ಕೆನರಾ ಬ್ಯಾಂಕಿನ ಗಂಗೊಳ್ಳಿ ಶಾಖೆಯಲ್ಲಿ ಆಯೋಜಿಸಲಾಗಿದ್ದ ಸಂಸ್ಥಾಪಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಟ್ಟಡ ಮಾಲೀಕ ಎಂ.ಜಿ.ಅಜಿತ್ ನಾಯಕ್, ಟಿ.ಗಂಗಾಧರ ಶೆಣೈ ಹಾಗೂ ವಿಜಯ ಖಾರ್ವಿ ಡಾ.ಅಮ್ಮೆಂಬಳ ಸುಬ್ಬರಾವ್ ಪೈ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶುಭ ಹಾರೈಸಿದರು. ಬ್ಯಾಂಕಿನ ಹಿರಿಯ ಅಧಿಕಾರಿ ಅಶೋಕ್ ಜಿ.ವಿ., ನಿರ್ಮಲ್ ಕುಮಾರ್, ಇಂದಿರಾ ಭಟ್, ಜಿ.ಗಂಗಾಧರ ಪೈ. ರಾಜೇಂದ್ರ ಹಾಗೂ ಬ್ಯಾಂಕಿನ ಗ್ರಾಹಕರು ಉಪಸ್ಥಿತರಿದ್ದರು. ಬ್ಯಾಂಕಿನ ಶಾಖಾ ಪ್ರಬಂಧಕ ಸ್ವಾಲ್ಡ್ ಕರ್ವೆಲ್ಲೊ ಸ್ವಾಗತಿಸಿದರು. ರಾಜೀವ ಯು.ಎ. ವಂದಿಸಿದರು.

Exit mobile version