Site icon Kundapra.com ಕುಂದಾಪ್ರ ಡಾಟ್ ಕಾಂ

ತಗ್ಗರ್ಸೆ: ಮಹಾಲಿಂಗೇಶ್ವರ ದೇವಳದ ಆವರಣ ಸ್ವಚ್ಚತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣ ಸ್ವಚ್ಛತಾ ಕಾರ್ಯಕ್ರಮ ಇತ್ತಿಚಿಗೆ ಊರಿನ ನಾಗರಿಕರಿಂದ ಜರುಗಿತು.

ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಟಿ. ನಾರಾಯಣ ಹೆಗ್ಡೆ, ಜಿ.ಪಂ ಸದಸ್ಯ ಬಾಬು ಶೆಟ್ಟಿ, ಶಂಕರ ಪೂಜಾರಿ, ಗ್ರಾ.ಪಂ ಸದಸ್ಯ ಬಾಲಕೃಷ್ಣ ಶೆಟ್ಟಿ, ಶಿಕ್ಷಕರುಗಳಾದ ಕರುಣಾಕರ ಶೆಟ್ಟಿ, ತಿಮ್ಮಪ್ಪ ಗಾಣಿಗ, ಉದಯಕುಮಾರ್ ಹೆಗ್ಡೆ ಹಾಗೂ ಊರಿನ ಸಾರ್ವಜನಿಕರು ಭಾಗವಹಿಸಿದ್ದರು.

Exit mobile version