Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ದೇವಳಕ್ಕೆ ಕಸಾಪ ರಾಜ್ಯಧ್ಯಕ್ಷ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಮನು ಬಳಿಗಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿಯಿತ್ತು ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಬಳಿಗಾರರಿಗೆ ಶಾಲು ಹೊದಿಸಿ, ಪ್ರಸಾದವನ್ನು ನೀಡಲಾಯಿತು. ಅವರೊಂದಿಗೆ ಮೈಸೂರಿನ ಶಾಸ್ತ್ರೀಯ ಭಾಷಾ ಅಧ್ಯಯನ ಪೀಠದ ಮುಖ್ಯಸ್ಥ ಪ್ರೋ. ಪಿ.ಕೆ.ಖಂಡೋಬಾ, ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ತಾಲೂಕು ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಸ್ಥಳೀಯ ಮುಖಂಡ ರಮೇಶ ಗಾಣಿಗ, ಬೈಂದೂರು ಹೋಬಳಿ ಕಸಾಪ ಅಧ್ಯಕ್ಷ ಗಣಪತಿ ಹೋಬಳಿದಾರ್, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ, ಚಿತ್ರ ಕಲಾವಿದ ಗಿರೀಶ್ ಉಪಸ್ಥಿತರಿದ್ದರು.

Exit mobile version