Site icon Kundapra.com ಕುಂದಾಪ್ರ ಡಾಟ್ ಕಾಂ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯತ್ನ

ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಕೊಂಗರ್‌ಖಾನ್‌ ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಜಾತಿಯ ಬಾಲಕಿಯ ಮೇಲೆ ಅತ್ಯಾಚಾರ ಪ್ರಯತ್ನ ಮಾಡಿದ ಅದೇ ಗ್ರಾಮದ ಅಜಿತ್‌ ಶೆಟ್ಟಿ (28) ವಿರುದ್ಧ ಸೆಕ್ಷನ್‌ 8ರ ಪೋಸ್ಕೊ ಕಾಯಿದೆಯಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದು , ಬೇಸಿಗೆಯ ರಜೆ ಇರುವುದರಿಂದ ಮನೆಯ ಪಕ್ಕದ ಬಾವಿಕಟ್ಟೆಯ ಬಳಿ ಬಟ್ಟೆ ತೊಳೆಯುತ್ತಿರುವ ವೇಳೆಯಲ್ಲಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಲದೇ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಸುಟ್ಟುಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಠಾಣೆಯಲ್ಲಿ ದೂರು ದಾಖಲಾಗಿತ್ತು.

Exit mobile version