Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರ್ಕಾರಿ ಜ್ಯೂನಿಯರ್ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಕ್ರೀಡಾಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪ್ರಶಾಂತ್ ಬಟ್ ಧ್ವಜಾರೋಹಣಗೈದರು. ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ ಧ್ವಜವಂದನೆ ಸ್ವೀಕರಿಸಿದರು. ವಿದ್ಯಾರ್ಥಿ ನಾಯಕ ಶರತ್ ಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲ ಪಾಲಾಕ್ಷ ಟಿ, ಉಪಪ್ರಾಂಶುಪಲೆ ಜ್ಯೋತಿ ಶ್ರೀನಿವಾಸ್, ಹಳೆ ವಿದ್ಯಾರ್ಥಿಗಳಾದ ಎನ್. ಆನಂದ ಶೆಟ್ಟಿ, ಬಿ. ಎಂ. ನಾಗರಾಜ ಗಾಣಿಗ, ಮಣಿಕಂಠ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಭಾಕರ ಎಸ್., ಪುಷ್ಪ ಶೆಟ್ಟಿ ಮೊದಲದವರು ಉಪಸ್ಥಿತರಿದ್ದರು. ಶಿಕ್ಷಕ ರವೀಂದ್ರ ಪಿ. ನಿರೂಪಿಸಿದರು.

Exit mobile version